ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮಪಡಿಸಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥಮಾಡದೆ ಆಯ್ದ ಸ್ಥಳದಲ್ಲಿ ಕೃಷಿಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿಭಾಗ್ಯ ಹಾಗೂ ಕೃಷಿಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿಅನುಷ್ಠಾನಗೊಳಿಸಲಾಗುತ್ತಿದೆ.
ಕೃಷಿಭಾಗ್ಯಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಕ್ಷೇತ್ರ ಬದುನಿರ್ಮಾಣ, ಕೃಷಿಹೊಂಡ, ನೀರು ಇಂಗದಂತೆ ತೆತಡೆಯಲು ಪಾಲಿಥೀನ್ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿಬೇಲಿ, ಡೀಸೆಲ್/ ಪೆಟ್ರೋಲ್/ ತುಂತುರು/ ಹನಿ) ನೀರಾವರಿ ಘಟಕಗಳ ಅನುಷ್ಠಾನಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ.90 ರಷ್ಟುಸಹಾಯಧನ ನೀಡಲಾಗುವುದು.
ರೈತರುಗಳು ಪಾಸ್‌ಪೋರ್ಟ್ಅಳತೆಯ ಭಾವಚಿತ್ರ, ಪಹಣಿ, ಜಾತಿಪ್ರಮಾಣಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ಕೃಷಿನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.