ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದ ಸುಕ್ಷೇತ್ರ ಇಂಚಲದಲ್ಲಿ 2024 ದಶಂಬರ 31 ರಿಂದ 2025 ಜನವರಿ 2ರವರೆಗೆ ಮೂರು ದಿನಗಳ ಕಾಲ ಕೃಷಿ ಮೇಳ ನಡೆಯಲಿದೆ.
ಜಗದ್ಗುರು ಶ್ರೀ ಡಾ. ಶಿವಾನಂದ ಭಾರತಿ ಸ್ವಾಮಿಗಳವರ 85ನೇ ವರ್ಷದ ಜಯಂತ್ಯುತ್ಸವ, ಶ್ರೀಗಳ 55ನೇ ವರ್ಷದ ಪೀಠಾರೋಹಣ ಹಾಗೂ 55ನೇ ವರ್ಷದ ಅಖಿಲ ಭಾರತ ವೇದಾಂತ ಪರಿಷತ್ ಮತ್ತು ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಈ ಕೃಷಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ