spot_img
Wednesday, July 16, 2025
spot_imgspot_img
spot_img

ದೇವನಹಳ್ಳಿ ರೈತರ ಹೋರಾಟಕ್ಕೆ ದೊಡ್ಡ ಗೆಲುವು ! ಭೂ ಸ್ವಾದೀನ ರದ್ದುಗೊಳಿಸಿದ  ರಾಜ್ಯ ಸರಕಾರ, ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ದೇವನಹಳ್ಳೀ ರೈತರ ಹೋರಾಟಕ್ಕೆ ದೊಡ್ಡ ಜಯ ದೊರೆತಿದೆ. ಭೂ ಸ್ವಾಧೀನದ ವಿರುದ್ಧ ಸುಧೀರ್ಘ ಹೋರಾಟ ನಡೆಸುತ್ತಲೇ ಬಂದಿದ್ದ ರೈತರಿಗೆ ಸರಕಾರ ಮಣಿದಿದೆ. ಭೂ ಸ್ವಾಧೀನ ಕೈಬಿಡಲು ನಿರ್ಧರಿಸಿದೆ. ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಜ್ಯ ಸರಕಾರ ಕೆಐಎಡಿಬಿಯಿಂದ 13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನಕ್ಕೆ ಸಿದ್ಧತೆ ನಡೆಸಿತ್ತು. ಆದರೆ ಇದನ್ನು ವಿರೋಧಿಸಿ ರೈತರು ಸುಮಾರು 1,200ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿದ್ದರು. ರೈತರ ಹೋರಾಟಕ್ಕೆ  ಸರಕಾರ ಮಣಿದಿದೆ.

ಈ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಸಾಧಕ-ಭಾದಕಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡಿದೆ ಚನ್ನರಾಯಪಟ್ಟಣ ಸುತ್ತಮುತ್ತಲಿನ 13 ಗ್ರಾಮಗಳ ಭೂ ಸ್ವಾಧೀನಕ್ಕೆ ಕೆಐಎಡಿಬಿಗೆ ಭೂಮಿ ನೀಡಲು ರೈತರು, ಸಂಘಟನೆಗಳು ಒಪ್ಪುತ್ತಿಲ್ಲ ಹಾಗಾಗಿ 1,777 ಎಕರೆ ಡಿನೋಟಿಫಿಕೇಷನ್ ಕೈಬಿಟ್ಟಿದ್ದೇವೆ. ಆದರೆ, ಭೂಮಾಲೀಕರು ಸ್ವಯಂ ಪ್ರೇರಿತರಾಗಿ ಭೂಮಿ ನೀಡಲು ಮುಂದಾದರೆ ಖರೀದಿಸುತ್ತೇವೆ. ಬಲವಂತವಾಗಿ ಖರೀದಿಸುವುದಿಲ್ಲ. ಸ್ವಯಂ ಪ್ರೇರಿತರಾಗಿ ಭೂಮಿ ನೀಡುವವರಿಗೆ ಸೂಕ್ತ ಪರಿಹಾರ ನೀಡುತ್ತೇವೆ ಎಂದು ತಿಳಿಸಿದರು.

ಸಚಿವರಾದ ಎಂಬಿ ಪಾಟೀಲ್, ಕೆ. ಎಚ್, ಮುನಿಯಪ್ಪ, ರೈತ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಟ ಪ್ರಕಾಶ್ ರಾಜ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

 

 

 

spot_img

ಸಂಬಂಧಿತ ಲೇಖನಗಳು

spot_img
- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group