ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಕೃಷಿ ಮತ್ತು ತೋಟಗಾರಿಕಾ ಮೇಳವು ನ.7ರಿಂದ 10 ರವರೆಗೆ ನಾಲ್ಕು ದಿನಗಳ ಕಾಲ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಲಿದೆ
“ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಧ್ಯೇಯೋದ್ದೇಶದೊಂದಿಗೆ ಹಮ್ಮಿಕೊಳ್ಳಲಾದ ಈ ಕೃಷಿ ಮೇಳದಲ್ಲಿ ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ಅಂತರ್ಜಲ ಮರುಪೂರಣ, ಹೈಟೆಕ್ ತೋಟಗಾರಿಕೆ, ಪುಷ್ಪ ಕೃಷಿ, ತಾರಸಿತೋಟ, ಲಂಬ ತೋಟ, ಜೇನು ವನ ಮತ್ತು ಕೀಟ ಪ್ರಪಂಚ, ಪರಿಸರ ಕೃಷಿ ಪ್ರವಾಸೋದ್ಯಮ, ಸಿರಿಧಾನ್ಯ ಮೌಲ್ಯವರ್ಧನೆ ಮತ್ತು ತಾಂತ್ರಿಕತೆ, ಗೋಡಂಬಿ ಬೆಳೆ ಪ್ರಾತ್ಯಕ್ಷಿಕೆ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಸಾವಯವ ಕೃಷಿ, ಅಣಬೆ ಬೇಸಾಯ, ಪಶುಸಂಗೋಪನೆ, ಮೀನುಗಾರಿಕೆ, ಕೃಷಿ ಉತ್ಪನ್ನಗಳ ಸಂಸ್ಕರಣೆ, ಕೃಷಿ ಪರಿಕರ ಮತ್ತ ಯಂತ್ರೋಪಕರಣಗಳು, ಕೃಷಿ ಮತ್ತು ತೋಟಗಾರಿಕಾ ಸಸಿಗಳು ಮತ್ತು ತಳಿಗಳ ಮಾರಾಟ ಮತ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.