spot_img
Thursday, October 8, 2026
spot_imgspot_img
- Advertisement -spot_img

ಪೌಷ್ಟಿಕ ಆಹಾರಕ್ಕೆ ಸಿರಿಧಾನ್ಯಗಳೇ ಬಲ: ರೈತರೊಂದಿಗೆ ಕೃಷಿ ವಿದ್ಯಾರ್ಥಿಗಳ ಗುಂಪು ಚರ್ಚೆ

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಭೈರನಕೊಪ್ಪ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳ ವತಿಯಿಂದ ರೈತರು ಹಾಗೂ ಮಹಿಳೆಯರಿಗೆ ಸಿರಿಧಾನ್ಯಗಳ ಮಹತ್ವ, ಪೌಷ್ಟಿಕಾಂಶಗಳ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಿರಿಧಾನ್ಯಗಳಾದ ರಾಗಿ, ನವಣೆ, ಸಜ್ಜೆ, ಹಾರಕ, ಊದಲು, ಕೊರಲೆ ಮತ್ತು ಸಾಮೆ ಮೊದಲಾದ ಬೆಳೆಗಳ ಮಹತ್ವವನ್ನು ವಿವರಿಸಿದರು. ಸಿರಿಧಾನ್ಯಗಳು ಪೌಷ್ಟಿಕಾಂಶದಿಂದ ಸಮೃದ್ಧವಾಗಿದ್ದು, ದೈನಂದಿನ ಆಹಾರದಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವುದರಿಂದ ಸಮತೋಲಿತ ಆಹಾರ ಪದ್ಧತಿಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಸಿರಿಧಾನ್ಯ ಬೆಳೆಗಳು ಕಡಿಮೆ ನೀರಿನಲ್ಲಿಯೂ ಬೆಳೆಯುವ ಸಾಮರ್ಥ್ಯ ಹೊಂದಿದ್ದು, ವಿವಿಧ ಹವಾಮಾನ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ಬೆಳೆಗಳಾಗಿವೆ. ರೈತರು ತಮ್ಮ ಸ್ಥಳೀಯ ಹವಾಮಾನ ಮತ್ತು ಮಣ್ಣಿನ ಪರಿಸ್ಥಿತಿಗೆ ಅನುಗುಣವಾಗಿ ಸಿರಿಧಾನ್ಯಗಳನ್ನು ಬೆಳೆ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವ ಕುರಿತು ವಿದ್ಯಾರ್ಥಿಗಳು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ಸಿರಿಧಾನ್ಯಗಳಿಂದ ತಯಾರಿಸಬಹುದಾದ ವಿವಿಧ ಆಹಾರ ಪದಾರ್ಥಗಳು, ಮೌಲ್ಯವರ್ಧಿತ ಉತ್ಪನ್ನಗಳು ಹಾಗೂ ಮನೆಯ ಮಟ್ಟದಲ್ಲಿ ಸಿರಿಧಾನ್ಯಗಳ ಬಳಕೆ ಕುರಿತು ಮಾಹಿತಿ ನೀಡಲಾಯಿತು. ಸಿರಿಧಾನ್ಯ ಆಧಾರಿತ ಉತ್ಪನ್ನಗಳ ತಯಾರಿಕೆ ಮೂಲಕ ಮಹಿಳೆಯರು ಸ್ವಯಂ ಉದ್ಯೋಗ ಮತ್ತು ಆದಾಯ ಗಳಿಕೆಯ ಅವಕಾಶಗಳನ್ನು ಬಳಸಿಕೊಳ್ಳಬಹುದು ಎಂದು ವಿದ್ಯಾರ್ಥಿಗಳು ವಿವರಿಸಿದರು.
ಕಾರ್ಯಕ್ರಮದಲ್ಲಿ ರೈತರು ಹಾಗೂ ಮಹಿಳೆಯರು ಭಾಗವಹಿಸಿ ಸಿರಿಧಾನ್ಯಗಳ ಕೃಷಿ, ಪೌಷ್ಟಿಕತೆ, ಸಂಸ್ಕರಣೆ ಮತ್ತು ಬಳಕೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.

ಈ ಲೇಖನಗಳನ್ನೂ ಓದಿ

- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group