spot_img
Saturday, July 18, 2026
spot_imgspot_img

ಕೃಷಿ ವಿಶ್ವವಿದ್ಯಾಲಯದಿಂದ ಸಾವಯವ ಮತ್ತು ನೈಸರ್ಗಿಕ ಕೃಷಿ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನ

​ಬೆಂಗಳೂರಿನ ಜಿಕೆವಿಕೆಯಲ್ಲಿರುವ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯದ ದೂರ ಶಿಕ್ಷಣ ಘಟಕವು ಎರಡು ವರ್ಷಗಳ ಸಾವಯವ ಮತ್ತು ನೈಸರ್ಗಿಕ ಕೃಷಿ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಬಯಸುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನವೀನ ಮಾದರಿಯ ಈ ಕೋರ್ಸ್ ಸಂಪೂರ್ಣವಾಗಿ ಕನ್ನಡ ಮಾಧ್ಯಮದಲ್ಲಿ ಇರಲಿದೆ.

​ಕೋರ್ಸ್ ಅವಧಿ: 24 ತಿಂಗಳುಗಳು (2 ವರ್ಷಗಳು)
​ಶೈಕ್ಷಣಿಕ ಅರ್ಹತೆ: 10ನೇ ತರಗತಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
​ಕೋರ್ಸ್ ಶುಲ್ಕ: ಒಟ್ಟು ರೂ. 24,000/- (ವರ್ಷಕ್ಕೆ ರೂ. 12,000/- ರಂತೆ). ಅಭ್ಯರ್ಥಿಗಳು ಪ್ರತಿ ಸೆಮಿಸ್ಟರ್ ಆರಂಭದಲ್ಲಿ ರೂ. 6,000/- ರಂತೆ ಒಟ್ಟು ನಾಲ್ಕು ಕಂತುಗಳಲ್ಲಿಯೂ ಶುಲ್ಕ ಪಾವತಿಸಲು ಅವಕಾಶವಿದೆ.

​ಅರ್ಜಿ ಪಡೆಯುವಿಕೆ: ಅಧಿಕೃತ ಜಾಲತಾಣ (www.uasbangalore.edu.in) ದಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದೆ.
​ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 07-08-2026
​ಹೆಚ್ಚಿನ ಮಾಹಿತಿ ಮತ್ತು ಸಂಪರ್ಕಕ್ಕಾಗಿ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ದೂರ ಶಿಕ್ಷಣ ಘಟಕದ ಕೇಂದ್ರ ಕಚೇರಿ ಮತ್ತು ಸಾವಯವ ಕೃಷಿ ಸಂಶೋಧನಾ ಸಂಸ್ಥೆಯನ್ನು ಮಾತ್ರ ಸಂಪರ್ಕಿಸಲು ಕೋರಲಾಗಿದೆ.

ಸಂಬಂಧಿತ ಲೇಖನಗಳು

spot_img
- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group