ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ತೃತೀಯ ವಿಶ್ವ ಹವ್ಯಕ ಸಮ್ಮೇಳನವು ಡಿಸೆಂಬರ್ 27ರಿಂದ 29 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಸಮ್ಮೇಳನದ ಸಂದರ್ಭದಲ್ಲಿ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ ಕರಕುಶಲ ಕಲೆ, ಕಸೂತಿ, ನೆಯ್ಗೆ, ಗೃಹ ಕೈಗಾರಿಕಾ ವಸ್ತುಗಳು, ಗ್ರಾಮೀಣೋದ್ಯಮ ಉತ್ಪನ್ನಗಳು, ಉಡುಗೆ-ತೊಡುಗೆಗಳು, ದಿನಬಳಕೆಯ ಆಹಾರ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ವಸ್ತು ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಿದೆ.