spot_img
Thursday, October 22, 2026
spot_imgspot_img
- Advertisement -spot_img

ಅಡಿಕೆ ಸಿಪ್ಪೆಯಿಂದ ಸಾವಯವ ಗೊಬ್ಬರ ತಯಾರಿಕೆ ಕುರಿತು ರೈತರಿಗೆ ಮಾಹಿತಿ

ಶಿವಮೊಗ್ಗ ತಾಲೂಕಿನ ರಾಮನಗರ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳಿಂದ ರೈತರಿಗೆ ಅಡಿಕೆ ಸಿಪ್ಪೆಯಿಂದ ಸಾವಯವ ಗೊಬ್ಬರ ತಯಾರಿಸುವ ವಿಧಾನದ ಕುರಿತು ಮಾಹಿತಿ ನೀಡಲಾಯಿತು.

ಅಡಿಕೆ ಸಿಪ್ಪೆಯನ್ನು ವ್ಯರ್ಥವಾಗಿ ಎಸೆಯುವ ಬದಲು ಅದನ್ನು ಸೂಕ್ತ ವಿಧಾನದಲ್ಲಿ ಕೊಳೆಸಿ ಸಾವಯವ ಗೊಬ್ಬರವಾಗಿ ಪರಿವರ್ತಿಸಬಹುದು. ಇದರಿಂದ ಮಣ್ಣಿನ ಫಲವತ್ತತೆ ಹೆಚ್ಚಿಸಲು, ಮಣ್ಣಿನ ತೇವಾಂಶವನ್ನು ಕಾಪಾಡಲು ಹಾಗೂ ಮಣ್ಣಿನ ಸಾವಯವ ಇಂಗಾಲದ ಪ್ರಮಾಣವನ್ನು ಸುಧಾರಿಸಲು ಸಹಾಯವಾಗುತ್ತದೆ. ಅಡಿಕೆ ಸಿಪ್ಪೆಯಂತಹ ಕೃಷಿ ತ್ಯಾಜ್ಯವನ್ನು ಸಮರ್ಪಕವಾಗಿ ಬಳಸುವುದರಿಂದ ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಕೃಷಿ ವೆಚ್ಚವನ್ನು ತಗ್ಗಿಸಲು ನೆರವಾಗುತ್ತದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅಡಿಕೆ ಸಿಪ್ಪೆಯ ಸದ್ಬಳಕೆ, ಗೊಬ್ಬರ ತಯಾರಿಕೆಯ ವಿಧಾನ ಹಾಗೂ ಅದರ ಕೃಷಿ ಪ್ರಯೋಜನಗಳ ಕುರಿತು ರೈತರಿಗೆ ಅರಿವು ಮೂಡಿಸಿದರು. ಕಾರ್ಯಕ್ರಮವು ಕೃಷಿ ತ್ಯಾಜ್ಯದ ಮರುಬಳಕೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿತ್ತು.

ಈ ಲೇಖನಗಳನ್ನೂ ಓದಿ

- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group