ಕೃಷಿ ವಿ.ವಿ ಧಾರವಾಡ ವಿಜಯಪುರ ಕೃಷಿ ಮಹಾವಿದ್ಯಾಲಯ, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆ ವಿಜಯಪುರದ ಹಿಟ್ನಳ್ಳಿ ಫಾರ್ಮ್ ಆವರಣದಲ್ಲಿ ಕೃಷಿ ಮೇಳವು ಮೂರು ದಿನಗಳ ಕಾಲ ನಡೆಯಲಿದೆ
ಜನವರಿ 11, 12, 13ರಂದು ನಡೆಯುವ ಈ ಕೃಷಿ ಮೇಳದಲ್ಲಿ ಆಧುನಿಕ ಕೃಷಿ ತಂತ್ರಜ್ಞಾನ ಮಾಹಿತಿ ಹಾಗೂ ಪ್ರದರ್ಶನ ಏರ್ಪಡಿಸಲಾಗಿದೆ. ಆಹಾರ ಮತ್ತು ಪೌಷ್ಟಿಕ ಭದ್ರತೆಗಾಗಿ ಸುಸ್ಥಿರ ಕೃಷಿ ಎಂಬ ಧ್ಯೇಯೋದ್ದೇಶದೊಂದಿಗೆ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ