ಉಡುಪಿ: ತೋಟಗಾರಿಕೆ ಇಲಾಖೆ, ಜಿ. ಪಂ.,ರಾಮನಗರ ಜಿಲ್ಲಾ ತೆಂಗು ಮತ್ತು ರೈತ ಉತ್ಪಾದಕರ ಸಂಸ್ಥೆ ಆಶ್ರಯದಲ್ಲಿ ದೊಡ್ಡಣಗುಡ್ಡೆ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ವಿವಿಧ ಮಾವಿನ ತಳಿಗಳ ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ರಾಮನಗರ ಜಿಲ್ಲೆಯಿಂದ ಬಾದಾಮಿ, ರಸಪುರಿ , ಮಲಗೋವಾ, ತೋತಾಪುರಿ, ಸಿಂಧೂರ ಮುಂತಾದ ತಳಿಗಳ ಒಟ್ಟು 40 ಟನ್ ನಷ್ಟು ಮಾವು ಮಾರಾಟಕ್ಕೆ 15 ರಿಂದ 20 ರೈತರು ಆಗಮಿಸುವರು. ಜಿಲ್ಲೆಯ ಮಾವು ಬೆಳೆಗಾರರಿಗೂ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದ್ದು , ಜಿಲ್ಲೆಯ ಮಾವು ಬೆಳೆಗಾರರು ಮೇ 15ರೊಳಗೆ ತಾವು ಬೆಳೆದ ತಳಿ ಹಾಗೂ ಲಭ್ಯತೆಯ ವಿವರದೊಂದಿಗೆ ಜಿಲ್ಲಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ (9141407672) ಸಂಪರ್ಕಿಸಿ ಮೇಳದಲ್ಲಿ ಭಾಗವಹಿಸಲು ಪ್ರಕಟಣೆ ತಿಳಿಸಿದೆ.