ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ಮಹಾವಿದ್ಯಾಲಯ ಮೂಡಿಗೆರೆ, ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಕಡೆಮಡ್ಕಲ್, ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಕೃಷಿ ಮತ್ತು ತೋಟಗಾರಿಕೆ ಮೇಳವು ಮೂಡಿಗೆರೆಯ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಡಿಸೆಂಬರ್ 19 ಮತ್ತು 20 ರಂದು ನಡೆಯಲಿದೆ. ಅಧಿಕ ಇಳುವರಿ ಭತ್ತದ ತಳಿ ಪ್ರಾತ್ಯಕ್ಷಿಕೆ, ಕಾಳುಮೆಣಸು ಮತ್ತು ಏಲಕ್ಕಿ ಬೆಳೆ ಕೃಷಿ, ತೋಟಗಾರಿಕೆ ತಂತ್ರಜ್ಞಾನಗಳು, ವಿದೇಶಿ ಹಣ್ಣಿನ ಪ್ರಾತ್ಯಕ್ಷಿಕೆ, ಕೃಷಿ ಯಂತ್ರೋಪಕರಣಗಳ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ






