spot_img
Friday, October 18, 2024
spot_imgspot_img
spot_img
spot_img

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೋಂದಣಿಗೆ ಸೂಚನೆ

ಕೃಷಿಬಿಂಬ ಸುದ್ದಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರೀತದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಮುಂಗಾರು ಹಂಗಾಮಿಗೆ ಈ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ.

ನೋಂದಣಿ ಮಾಡಿಕೊಳ್ಳಲು ಕೊನೆಯ ದಿನಾಂಕ ಜುಲೈ 15 ಆಗಿದ್ದು ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್ ಮತ್ತು ಡಿಜಿಟಲ್ ಇ- ಸೇವಾ ಕೇಂದ್ರವನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ವಾಣಿಜ್ಯ ಗ್ರಾಮೀಣ ಸಹಕಾರಿ ಬ್ಯಾಂಕ್, ಹೋಬಳಿ ರೈತ ಸಂಪರ್ಕ ಕೇಂದ್ರ, ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಪ್ರಕಟನೆ ತಿಳಿಸಿದೆ.

spot_img

ಸಂಬಂಧಿತ ಲೇಖನಗಳು

spot_img
- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group