spot_img
Sunday, November 3, 2024
spot_imgspot_img
spot_img
spot_img

ನ.17 ರಿಂದ ಬೆಂಗಳೂರಿನಲ್ಲಿ ಕೃಷಿ ಮೇಳ: ಏನೇನಿದೆ ಸ್ಪೆಷಲ್?ಕೃಷಿ ಆಸಕ್ತರು ಹೋಗಲೇಬೇಕು ಯಾಕೆ?

ಸುಧಾರಿತ ಪದ್ದತಿಗಳನ್ನು ಸಮರ್ಪಕವಾಗಿ ಆಚರಣೆಗೆ ತಂದಿರುವ ಪ್ರಾತ್ಯಕ್ಷಿಕೆ ಕ್ಷೇತ್ರಗಳಿಗೆ ಭೇಟಿ ನೀಡಿ ವಿಷಯದ ಪ್ರತ್ಯಕ್ಷ ಅನುಭವ ಪಡೆಯುವ ವಿಧಾನವೇ ಕೃಷಿ ಮೇಳ. ಇದರಲ್ಲಿ ಕ್ಷೇತ್ರ ಸಂದರ್ಶನ, ತಜ್ಞರೊಂದಿಗೆ ಚರ್ಚೆ, ವಸ್ತು ಪ್ರದರ್ಶನ ಮುಂತಾದವುಗಳು ಅಡಕವಾಗಿವೆ. ಕೃಷಿ ಮೇಳವನ್ನು ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ನಿರಂತರವಾಗಿ ಆಚರಿಸುತ್ತಾ ರೈತರು ಹಾಗೂ ವಿಸ್ತರಣಾ ಕಾರ್ಯಕರ್ತರಿಗೆ ಕೃಷಿ ತಾಂತ್ರಿಕತೆಯ ಜ್ಞಾನದ ವಿವಿಧ ಮಜಲುಗಳನ್ನು ಪರಿಚಯ ಮಾಡಿಕೊಡುತ್ತಾ ಬಂದಿರುತ್ತದೆ.

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿ  ಪ್ರಾರಂಭವಾದ ಕ್ಷೇತ್ರೋತ್ಸವವು ಕಾಲಾನುಕ್ರಮದಲ್ಲಿ ಕೃಷಿ ಮೇಳವಾಗಿ ಪರಿವರ್ತನೆಗೊಂಡು ಅತ್ಯಂತ ಜನಪ್ರಿಯಗೊಂಡಿದೆ. ಈ ವರ್ಷ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ಕರ್ನಾಟಕ ಸರ್ಕಾರದ ಕೃಷಿ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ಹಾಲು ಮಹಾಮಂಡಳಿಗಳ ಸಂಯುಕ್ತ ಆಶ್ರಯದಲ್ಲಿ ಕೃ.ವಿ.ವಿ, ಬೆಂಗಳೂರಿನ, ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಕೃಷಿ ಮೇಳವನ್ನು ನವೆಂಬರ್ 17 ರಿಂದ 2೦, 2023 ರವರೆಗೆ ನಾಲ್ಕು ದಿನಗಳ ಕಾಲ “ಉತ್ತಮ ಆಹಾರ, ಆರೋಗ್ಯ ಮತ್ತು ಆದಾಯಕ್ಕಾಗಿ ಸಿರಿಧನ್ಯಗಳು” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗುತ್ತಿದೆ.

 ಕೃಷಿ ಮೇಳದ ವಿಶೇಷ ಏನು?

 ಐದು ಹೊಸ ತಳಿಗಳ ಬಿಡುಗಡೆ
 ಕೃಷಿ ಸಾಧಕರಿಗೆ ಪುರಸ್ಕಾರ.
 ಭೌತಿಕವಾಗಿ ಮತ್ತು ಸಾಮಾಜಿಕ ಜಾಲತಾಣದಲ್ಲಿ .
 ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ತಾಕುಗಳು.

 ಸುಧಾರಿತ ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆಗಳು
 ಕೃಷಿಯಲ್ಲಿ ನೂತನ ತಂತ್ರಜ್ಞಾನಗಳ ಮಾಹಿತಿ
 ಜಲಾನಯನ ನಿರ್ವಹಣೆ
 ತೋಟಗಾರಿಕೆ ಬೆಳೆಗಳ ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆಗಳು
 ಪಶುಸಂಗೋಪನೆ, ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೀನು ಸಾಕಣೆ
 ಸಿರಿಧಾನ್ಯಗಳು ಹಾಗೂ ಮಹತ್ವ
 ಔಷಧೀಯ ಮತ್ತು ಸುಗಂಧಯುಕ್ತ ಸಸ್ಯಗಳು
 ನೂತನವಾಗಿ ಬಿಡುಗಡೆಯಾದ ವಿವಿಧ ಬೆಳೆ ತಳಿಗಳ ಪ್ರಾತ್ಯಕ್ಷಿಕೆಗಳು
 ಮಳೆ ಹಾಗೂ ಮೇಲ್ಛಾವಣಿ ನೀರಿನ ಕೋಯ್ಲು
 ಸಮಗ್ರ ಪೀಡೆ ಹಾಗೂ ಪೋಷಕಾಂಶಗಳ ನಿರ್ವಹಣೆ
 ಮಣ್ಣು ಪರೀಕ್ಷೆಗನುಗುಣವಾಗಿ ಬೆಳೆ ಸ್ಪಂದನೆ ಪ್ರಾತ್ಯಕ್ಷಿಕೆ
 ಕೃಷಿಯಲ್ಲಿ ಡ್ರೋನ್ ಬಳಕೆ
 ಜೈವಿಕ ಹಾಗೂ ನವೀಕರಿಸಲ್ಪಡುವ ಇಂಧನಗಳು
 ಸಾವಯವ ಕೃಷಿ ಪದ್ಧತಿಗಳು
 ಮಾರುಕಟ್ಟೆ ನೈಪುಣ್ಯತೆ ಮಾಹಿತಿ
 ಕೊಯ್ಲಿನೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ
 ಬಿತ್ತನೆ ಬೀಜಗಳ ಮೊಳಕೆ ಪರೀಕ್ಷೆ ಹಾಗೂ ಶೇಖರಣೆ
 ಸÀಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆಗಳು
 ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ
 ಹವಾಮಾನ ಚತುರ ಕೃಷಿ
 ಖುಷ್ಕಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿಗಳು
 ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು
 ಮಣ್ಣು ರಹಿತ ಕೃಷಿ
 ರೈತರ ಕೃಷಿ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ
 ರೈತರಿಂದ ರೈತರಿಗಾಗಿ ಚರ್ಚಾಗೋಷ್ಠಿ
 ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ

 ಕೃಷಿ ಸಾಧಕರಿಗೆ ಪುರಸ್ಕಾರ
 ರಾಜ್ಯ ಮಟ್ಟದ ಪ್ರಶಸ್ತಿಗಳು: ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಗುವುದು, ಅವುಗಳೆಂದರೆ

ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ
ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ
ಕ್ಯಾನ್ ಬ್ಯಾಂಕ್ ಅತ್ಯುತ್ತಮ ಕೃಷಿಕ ಪ್ರಶಸ್ತಿ
ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ
ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ

 ಜಿಲ್ಲಾ ಮಟ್ಟದ ಪ್ರಶಸ್ತಿಗಳು
ಜಿಲ್ಲಾ ಮಟ್ಟದ ಪ್ರಗತಿಪರ ರೈತ ಪ್ರಶಸ್ತಿ ಮತ್ತು ರೈತ ಮಹಿಳಾ ಪ್ರಶಸ್ತಿ: ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವ್ಯಾಪ್ತಿಗೆ ಒಳಪಡುವ ೧೦ ಜಿಲ್ಲೆಗಳಲ್ಲಿ ಪ್ರಗತಿಪರ ರೈತ ಪ್ರಶಸ್ತಿ ಮತ್ತು ಪ್ರಗತಿಪರ ರೈತ ಮಹಿಳಾ ಪ್ರಶಸ್ತಿಗಳನ್ನು ಅರ್ಹ ಪ್ರಗತಿ ಪರ ರೈತ ಮತ್ತು ರೈತ ಮಹಿಳೆಯರಿಗೆ ನೀಡಲಾಗುವುದು.
ತಾಲ್ಲೂಕು ಮಟ್ಟದ ಪ್ರಶಸ್ತಿಗಳು
ತಾಲ್ಲೂಕು ಮಟ್ಟದ ಪ್ರಗತಿಪರ ಯುವ ರೈತ ಪ್ರಶಸ್ತಿ ಮತ್ತು ಯುವ ರೈತ ಮಹಿಳಾ ಪ್ರಶಸ್ತಿ: ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವ್ಯಾಪ್ತಿಗೆ ಒಳಪಡುವ ೬೧ ತಾಲ್ಲೂಕುಗಳಲ್ಲಿ ಪ್ರಗತಿಪರ ಯುವ ರೈತ ಪ್ರಶಸ್ತಿ ಮತ್ತು ಪ್ರಗತಿಪರ ಯುವ ರೈತ ಮಹಿಳಾ ಪ್ರಶಸ್ತಿಗಳನ್ನು ಅರ್ಹ ಪ್ರಗತಿಪರ ಯುವ ರೈತ ಮತ್ತು ಪ್ರಗತಿಪರ ಯುವ ರೈತ ಮಹಿಳೆಯರಿಗೆ ನೀಡಲಾಗುವುದು. ಅಭ್ಯರ್ಥಿಗಳ ವಯಸ್ಸು ೩೫ ವರ್ಷ ಮೀರಿರಬಾರದು.

 ಕೃಷಿ ವಸ್ತು ಪ್ರದರ್ಶನ
ಕೃ.ವಿ.ವಿ, ಬೆಂಗಳೂರು ಮಳಿಗೆ ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು / ಸಂಸ್ಥೆಗಳು, ಅಭಿವೃದ್ಧಿ ಇಲಾಖೆಗಳ ಮಳಿಗೆಗಳು, ಕೃಷಿ ಪರಿಕರಗಳ ಮಳಿಗೆಗಳು, ಕೃಷಿ ಇಂಜಿನಿಯರಿಂಗ್ ಮತ್ತು ಪಶುಸಂಗೋಪನೆ ಮತ್ತು ಕೃಷಿ ವಿಶ್ವವಿದ್ಯಾನಿಲಯದ ನೂತನ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಗುವುದು ಹಾಗೂ ರೈತರ ಕೃಷಿ ಸಮಸ್ಯೆಗಳಿಗೆ ತಜ್ಞರಿಂದ ವೈಜ್ಞಾನಿಕ ಸಲಹೆ, ತಜ್ಞ ವಿಜ್ಞಾನಿಗಳ ತಂಡದಿಂದ ಕೃಷಿ ಸಂಬಂಧಿ ಪ್ರಶ್ನೆಗಳಿಗೆ ಭೌತಿಕವಾಗಿ ಮತ್ತು ಜೂಮ್ ಸಭೆ ಮೂಲಕ ನೇರ ಪರಿಹಾರ, ಪ್ರಾತ್ಯಕ್ಷಿಕಾ ತಾಕುಗಳು, ಮಳಿಗೆಗಳು ಮತ್ತು ಕೃಷಿ ಮೇಳದ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಖುಷ್ಕಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿಗಳು, ನೂತನವಾಗಿ ಬಿಡುಗಡೆಯಾದ ವಿವಿಧ ಬೆಳೆ ತಳಿಗಳ ಪ್ರಾತ್ಯಕ್ಷಿಕೆ, ತೋಟಗಾರಿಕೆ ಬೆಳೆಗಳ ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆ, ಸಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳು ಹಾಗೂ ಮಹತ್ವ, ಔಷಧೀಯ ಮತ್ತು ಸುಗಂಧದ್ರವ್ಯ ಸಸ್ಯಗಳು, ಜಲಾನಯನ ನಿರ್ವಹಣೆ, ಸಾವಯವ ಕೃಷಿ ಪದ್ಧತಿಗಳು, ಸಮಗ್ರ ಪೋಷಕಾಂಶಗಳು ಹಾಗೂ ಪೀಡೆ ನಿರ್ವಹಣೆ, ಮಣ್ಣು ಪರೀಕ್ಷೆಗನುಗುಣವಾಗಿ ಬೆಳೆ ಸ್ಪಂದನೆ ಪ್ರಾತ್ಯಕ್ಷಿಕೆ, ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ, ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು, ಮಳೆ ಹಾಗೂ ಮೇಲ್ಛಾವಣಿ ನೀರಿನ ಕೋಯ್ಲು, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೊಯ್ಲಿನೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಬಿತ್ತನೆ ಬೀಜಗಳ ಪರೀಕ್ಷೆ ಹಾಗೂ ಶೇಖರಣೆ, ಪಶುಸಂಗೋಪನೆ, ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೀನು ಸಾಕಣೆ, ಮಾರುಕಟ್ಟೆ ನೈಪುಣ್ಯತೆ ಮಾಹಿತಿ, ಹವಾಮಾನ ಚತುರ ಕೃಷಿ, ಕೃಷಿಯಲ್ಲಿ ನೂತನ ಮಾಹಿತಿ ತಂತ್ರಜ್ಞಾನ, ಜೈವಿಕ ಹಾಗೂ ನವೀಕರಿಸಲ್ಪಡುವ ಇಂಧನ, ರೈತರಿಂದ ರೈತರಿಗಾಗಿ ಚರ್ಚಾಗೋಷ್ಠಿ, ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ ವ್ಯವಸ್ಥೆ ಮಾಡಲಾಗುವುದು.

 ವಿಶೇಷ ಸವಲತ್ತುಗಳು
• ಜಿ.ಕೆ.ವಿ.ಕೆ ಯ ಮಹಾದ್ವಾರದಿಂದ ಕೃಷಿ ಮೇಳದ ಸಭಾಂಗಣಕ್ಕೆ ತಲುಪಲು ಉಚಿತ ಸಾರಿಗೆ ವ್ಯವಸ್ಥೆ.
• ಪ್ರತ್ಯೇಕ ವಾಹನ ನಿಲುಗಡೆ ವ್ಯವಸ್ಥೆ.
• ಉಚಿತ ಪ್ರವೇಶ
• ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ.

ಬರಹ: ಡಾ: ಕೆ. ಶಿವರಾಮು ಮತ್ತು ಡಾ: ಎಂ.ಎ.ಮೂರ್ತಿ
ಕೃಷಿ ಮಾಹಿತಿ ಘಟಕ, ವಿಸ್ತರಣಾ ನಿರ್ದೇಶನಲಯ, ಜಿಕೆವಿಕೆ, ಬೆಂಗಳೂರು

spot_img

ಸಂಬಂಧಿತ ಲೇಖನಗಳು

spot_img
- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group