spot_img
Sunday, December 8, 2024
spot_imgspot_img
spot_img
spot_img

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಇ-ಕೆವೈಸಿ ಮಾಡಿಸಲೇಬೇಕು!

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಂದಿನ ಕಂತಿನ ಆರ್ಥಿಕ ನೆರವು ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯ. ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದರೆ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಜಿಲ್ಲೆಯಲ್ಲಿ ಒಟ್ಟು 1,53,351 ರೈತರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್‌ ನಿಧಿ ಯೋಜನೆಯ ಫಲಾನುಭವಿಗಳಾಗಿದ್ದು, ಇದುವರೆಗೆ 1,16,835 ರೈತರು ಮಾತ್ರ ಇ-ಕೆವೈಸಿ ಮಾಡಿಸಿಕೊಂಡಿದ್ದಾರೆ. ಇ-ಕೆವೈಸಿ ಮಾಡಿಸುವ ವಿಧಾನ: ಸ್ಮಾರ್ಟ್ ಫೋನ್ ಬಳಸುವ ರೈತರು http://pmkisan.gov. in ಪೋರ್ಟಲ್‌ನ ಫಾರ್ಮರ್ ಕೋರ್ನರ್ ನ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್‌ ಸಂಖ್ಯೆಯನ್ನು ದಾಖಲಿಸಿ ಮಾಡಿಸಿಕೊಳ್ಳಬಹುದು. ಅಥವಾ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಾಗರಿಕ ಸೇವಾ ಕೇಂದ್ರ (ಸಿಎಸ್‌ಸಿ)/ ಗ್ರಾಮಒನ್ ಸೇವಾ ಕೇಂದ್ರದಲ್ಲಿಯೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

ಸಂಬಂಧಿತ ಲೇಖನಗಳು

spot_img
- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group