ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಹಾಗೂ ಭಾರತೀಯ ಕೃಷಿ ಅನುಸಂಧಾನ ಪರಿಷತ್ (ICAR) ಅಧೀನದ ಕೃಷಿ ವಿಜ್ಞಾನ ಕೇಂದ್ರ (KVK), ಬ್ರಹ್ಮಾವರ ವತಿಯಿಂದ 3 ದಿನಗಳ “ವೈಜ್ಞಾನಿಕ ಜೇನು ಕೃಷಿ ಪ್ರಾಯೋಗಿಕ ತರಬೇತಿ” ಆಯೋಜಿಸಲಾಗಿದೆ.ಈ ತರಬೇತಿ ಜುಲೈ 23ರಿಂದ 25, 2026ರವರೆಗೆ ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರದಲ್ಲಿ ನಡೆಯಲಿದೆ.
ಜೇನು ಸಾಕಾಣಿಕೆಯಲ್ಲಿ ಆಸಕ್ತಿ ಹೊಂದಿರುವ ರೈತರು, ಯುವಕರು, ಮಹಿಳೆಯರು ಹಾಗೂ ಉದ್ಯಮ ಆರಂಭಿಸಲು ಬಯಸುವವರಿಗೆ ಪ್ರಾಯೋಗಿಕ ಮಾಹಿತಿಯನ್ನು ನೀಡಲಾಗುತ್ತದೆ.
ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ: 99722 47539 ಸಂಖ್ಯೆಗೆ ಕರೆ ಮಾಡಬಹುದು ಅಥವಾ ವಾಟ್ಸ್ಆಪ್ ಮೂಲಕ ಹೆಸರು ಕಳುಹಿಸಿ ನೋಂದಣಿ ಮಾಡಿಕೊಳ್ಳಬಹುದು.ಮೊದಲ 30 ಮುಂಗಡ ನೋಂದಾಯಿತ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿದ್ದು, ಆಸಕ್ತರು ಶೀಘ್ರದಲ್ಲೇ ಹೆಸರು ನೋಂದಾಯಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.






