ಕೃಷಿಬಿಂಬ ಸುದ್ದಿ-(ಪುತ್ತೂರು) : ಕರ್ನಾಟಕ ಕೃಷಿ ಸಮಾಜ ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ ದಕ್ಷಿಣ ಕನ್ನಡ ಇದರ ಸಂಯೋಜನೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳವು ಜನವರಿ 10 ರಿಂದ 12ರವರೆಗೆ ಮೂರು ದಿನಗಳ ಕಾಲ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯಲಿದೆ
ಈ ಸಂದರ್ಭದಲ್ಲಿ ವಿವಿಧ ವಿಚಾರಗೋಷ್ಠಿ ಮತ್ತು ಪ್ರಾತ್ಯಕ್ಷಿಕೆ, ವೈಜ್ಞಾನಿಕ ಕೃಷಿ ಪದ್ಧತಿ, ಕೃಷಿ ಪರಿಕರ ಯಂತ್ರೋಪಕರಣ ಪ್ರದರ್ಶನ ಮತ್ತು ಮಾರಾಟ ಜಾನುವಾರು ಪ್ರದರ್ಶನ, ನರ್ಸರಿ ಗಿಡಗಳ ಪ್ರದರ್ಶನ ಮತ್ತು ಮಾರಾಟ, ಸಾಧಕ ರೈತರಿಗೆ, ಕೃಷಿ ಕೂಲಿ ಕಾರ್ಮಿಕರಿಗೆ, ಕೃಷಿ ಪರಿಕರ ಉತ್ಪಾದಕ ಉದ್ಯಮಿಗಳಿಗೆ ಸನ್ಮಾನ ನಡೆಯಲಿದೆ.
ಪುತ್ತೂರಿನಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ






