ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಭೈರನಕೊಪ್ಪ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ನವೀನ್ ಅವರ ಮಾರ್ಗದರ್ಶನದಲ್ಲಿ ರೈತ ಮಹಿಳೆಯರು ಮತ್ತು ಗ್ರಾಮಸ್ಥರಿಗೆ ಕೈತೋಟ (Kitchen Garden) ನಿರ್ಮಾಣದ ಕುರಿತು ಮಾಹಿತಿ ನೀಡಲಾಯಿತು.

ಕೈತೋಟದಲ್ಲಿ ವಿವಿಧ ತರಕಾರಿಗಳನ್ನು ಬೆಳೆಸುವ ವಿಧಾನ, ಸಾವಯವ ಗೊಬ್ಬರಗಳ ಬಳಕೆ, ನೀರಿನ ಸಮರ್ಪಕ ನಿರ್ವಹಣೆ ಹಾಗೂ ಮನೆಯ ತ್ಯಾಜ್ಯವನ್ನು ಗೊಬ್ಬರವಾಗಿ ಬಳಸುವ ಕುರಿತು ತಿಳಿಸಲಾಯಿತು. ಇದರಿಂದ ಕುಟುಂಬಕ್ಕೆ ತಾಜಾ, ಪೌಷ್ಟಿಕ ತರಕಾರಿಗಳು ದೊರೆಯುವುದರ ಜೊತೆಗೆ ಮನೆಯ ಖರ್ಚನ್ನೂ ಕಡಿಮೆ ಮಾಡಬಹುದು ಎಂದು ವಿವರಿಸಲಾಯಿತು










